ಖ್ಯಾತ ನಟಿ ಸುಭಾಷಿಣಿ ಮನೆಯಲ್ಲಿ ಶವವಾಗಿ ಪತ್ತೆ

ಖ್ಯಾತ ತಮಿಳು ಕಿರುತೆರೆ ನಟಿ ಮತ್ತು ‘ಕಾಯಲ್’ (Kayal) ಧಾರಾವಾಹಿಯ ಮೂಲಕ ಜನಪ್ರಿಯರಾಗಿದ್ದ ಸುಭಾಷಿನಿ ಚೆನ್ನೈನಲ್ಲಿ  ಮೃತಪಟ್ಟಿದ್ದಾರೆ. ಇವರನ್ನು ಅಭಿಮಾನಿಗಳು‌ ಪ್ರೀತಿಯಿಂದ ಶಶ್ವಿನಿಬಾಲ ಎಂದೂ ಕರೆಯುತ್ತಾರೆ.

ಚೆನ್ನೈನ ಮೌಲಿವಾಕ್ಕಂನಲ್ಲಿರುವ ತಮ್ಮ ನಿವಾಸದಲ್ಲಿ ಸುಭಾಷಿನಿ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಧಾರಾವಾಹಿಗಳಲ್ಲಿ ಸಕ್ರಿಯರಾಗಿದ್ದ ಅವರು ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ಫಾಲೋವರ್ಸ್‌ ಹೊಂದಿದ್ದರು. ಅವರ ಸಾವು ಕಿರುತೆರೆ ಲೋಕಕ್ಕೆ ದೊಡ್ಡ ಆಘಾತ ತಂದಿದೆ.

ವರದಿಗಳ ಪ್ರಕಾರ, ಸುಭಾಷಿನಿ ಅವರು ಕಳೆದ ಕೆಲವು ಸಮಯದಿಂದ ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಂದ ಒತ್ತಡದಲ್ಲಿದ್ದರು ಎನ್ನಲಾಗಿದೆ. ಆದರೆ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಚೆನ್ನೈ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವು ಆತ್ಮಹತ್ಯೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.
ಅವರ ಅಕಾಲಿಕ ನಿಧನಕ್ಕೆ ಅಭಿಮಾನಿಗಳು ಮತ್ತು ಸಹನಟರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಕಾರ ನ್ಯೂಸ್

Leave a Reply

Discover more from

Subscribe now to keep reading and get access to the full archive.

Continue reading