ಸುಳ್ಯದಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ: ಸಾರ್ವಜನಿಕರು ಭಾಗವಹಿಸುವಂತೆ ಸಂಘಟಕರ ಮನವಿ

ಸುಳ್ಯ:ಭಾರತ ಸಂವಿಧಾನದ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು, ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ದಿನಾಂಕ 14-04-2026, ಮಂಗಳವಾರದಂದು ಸಮಯ ಪೂರ್ವಾಹ್ನ 11.00 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣ, ಸುಳ್ಯ ಇಲ್ಲಿ ನಡೆಯಲಿದೆ

ಈ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಕು. ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತರಿರಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಮತ್ತು ಎ.ಓ.ಎಲ್.ಇ. ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ಗೌರವ ಉಪಸ್ಥಿತರಿರಲಿದ್ದಾರೆ. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಬ್ಬಪ್ಪ ಕೈಕಂಬ ಅವರು ಸಂಸ್ಮರಣಾ ಉಪನ್ಯಾಸ ನೀಡಲಿದ್ದಾರೆ.

ಸಂಸದರಾದ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯರಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ವಿಧಾನ ಪರಿಷತ್ ಸದಸ್ಯರುಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ತಾಲೂಕಿನ ಸಮಸ್ತ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading