


ಎಲಿಮಲೆ ಸರ್ಕಾರಿ ಪ್ರೌಢಶಾಲೆಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಶೇಕಡಾ 95.38ರಷ್ಟು ಫಲಿತಾಂಶವನ್ನು ದಾಖಲಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಈ ವರ್ಷ ಶಾಲೆಯಿಂದ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 65 ವಿದ್ಯಾರ್ಥಿಗಳಲ್ಲಿ 62 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದ ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.




ವೈಯಕ್ತಿಕ ಸಾಧನೆಯಲ್ಲಿ ಬುಸ್ತಾನ ಅವರು 586 ಅಂಕಗಳನ್ನು ಗಳಿಸಿ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಭೂಮಿಕಾ ಕೆ ಅವರು 567 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಶಾಲೆಯ ಶಿಕ್ಷಕ ವೃಂದ, ಪೋಷಕರು ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

