ಸುಳ್ಯ ಸೈಂಟ್ ಜೋಸಫ್ ನ 17 ವಿದ್ಯಾರ್ಥಿಗಳಿಗೆ 600 ಕ್ಕಿಂತ ಹೆಚ್ಚು ಅಂಕಗಳು

ಸುಳ್ಯದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100 ರಷ್ಟು ಫಲಿತಾಂಶವನ್ನು ದಾಖಲಿಸಿದೆ.

ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಗರಿಷ್ಠ ಅಂಕಗಳಾಗಿ ಕ್ರಮವಾಗಿ 614, 613 (ಇಬ್ಬರು) ಮತ್ತು 612 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಒಟ್ಟು 17 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಅದ್ಭುತ ಯಶಸ್ಸನ್ನು ಸಾಧಿಸಿದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯದರ್ಶಿಗಳು, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ ಹಾಗೂ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading