





ಸುಳ್ಯದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ಝೀಲಾ ಜಿ. ಹೆಚ್. ಅವರು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರು ಒಟ್ಟು 625 ಅಂಕಗಳಿಗೆ 604 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.
ತನ್ಝೀಲಾ ಅವರು ಹೈದರ್ ಕುಕ್ಕುಂಬಳ ಮತ್ತು ತಾಹಿರಾ ಜಿ. ಹೆಚ್. ದಂಪತಿಗಳ ಪುತ್ರಿಯಾಗಿದ್ದಾರೆ. ಗ್ರಾಮೀಣ ಭಾಗದ ಪ್ರತಿಭೆಯಾದ ಇವರು ಶಿಸ್ತುಬದ್ಧ ಓದು ಮತ್ತು ಶ್ರಮದ ಫಲವಾಗಿ ಈ ಉನ್ನತ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಈ ವಿಶೇಷ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಸ್ಥಳೀಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

