ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ನಿವಾಸಿಗಳಾದ ಅಬ್ದುಲ್ಲ ಮತ್ತು ಶಾಹಿನಾ ದಂಪತಿಯ ಪುತ್ರಿ ಫಾತಿಮಾ ಸನಾ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮತ್ತು ಮದ್ರಸ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ವಿದ್ಯಾರ್ಥಿನಿಯಾದ ಇವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಿಗೆ 568 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಇದರ ಜೊತೆಗೆ ಇಸ್ಲಾಮಿಕ್ ಮದ್ರಸ ಕಲಿಕೆಯಲ್ಲಿ ಹತ್ತನೇ ತರಗತಿಯಲ್ಲಿ ಮದ್ರಸಕ್ಕೆ ಪ್ರಥಮ ಸ್ಥಾನ ಹಾಗೂ ರೇಂಜ್ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಲೌಕಿಕ ಮತ್ತು ಧಾರ್ಮಿಕ ಶಿಕ್ಷಣ ಎರಡರಲ್ಲೂ ಸಮಾನವಾಗಿ ಸಾಧನೆ ತೋರಿದ್ದಾರೆ.








