ಗ್ಯಾಸ್ ಪೂರೈಕೆಯ ವ್ಯತ್ಯಯದ ಬಗ್ಗೆ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಎಲ್‌ಪಿಜಿ ಮತ್ತು ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ವಿರೋಧಿಸಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ಮತ್ತು ಹಕ್ಕೊತ್ತಾಯ ಸಭೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಏಪ್ರಿಲ್ 27ರ ಸೋಮವಾರ ಸಂಜೆ 5:00 ಗಂಟೆಗೆ ಸುಳ್ಯದಲ್ಲಿ ನಡೆಯಲಿದೆ.


ಯುವ ಕಾಂಗ್ರೆಸ್ ಸಮಿತಿ ಸುಳ್ಯ ಬ್ಲಾಕ್, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಯುವ ಕಾಂಗ್ರೆಸ್ ಸಮಿತಿ ಸುಳ್ಯ ವಿಧಾನಸಭಾ ಕ್ಷೇತ್ರ ಹಾಗೂ ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಜರುಗಲಿದೆ. ಸುಳ್ಯ ಬ್ಲಾಕ್ ವ್ಯಾಪ್ತಿಯ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.


ಗ್ಯಾಸ್ ಬೆಲೆ ಏರಿಕೆ ಹಾಗೂ ಪೂರೈಕೆಯ ಅನಿಶ್ಚಿತತೆಯಿಂದ ಜನಸಾಮಾನ್ಯರು ಮತ್ತು ರಿಕ್ಷಾ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಈ ಸಭೆಯನ್ನು ಆಯೋಜಿಸಲಾಗಿದ್ದು, ಕೇಂದ್ರದ ನೀತಿಗಳ ವಿರುದ್ಧ ಬೃಹತ್ ಮೆರವಣಿಗೆಯನ್ನು ನಡೆಸಲು ನಿರ್ಧರಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading