ತಮಿಳುನಾಡು ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದ್ದು, ಕಾಂಗ್ರೆಸ್ ಪಕ್ಷವು ಡಿಎಂಕೆ ಮೈತ್ರಿಯಿಂದ ಹೊರಬರಲು ನಿರ್ಧರಿಸಿದೆ. ದಶಕಗಳಿಂದ ಡಿಎಂಕೆ ಜೊತೆಗಿದ್ದ ಮೈತ್ರಿಯನ್ನು ಕಡಿದುಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ತನ್ನ ಬೆಂಬಲವನ್ನು ಸೂಚಿಸಿದೆ.

ಈ ನಿರ್ಧಾರವು ರಾಜ್ಯ ರಾಜಕೀಯದ ಲೆಕ್ಕಾಚಾರಗಳನ್ನು ಸಂಪೂರ್ಣವಾಗಿ ಬದಲಿಸಿದೆ. ಡಿಎಂಕೆ ಮತ್ತು ಎಐಎಡಿಎಂಕೆಗೆ ಪರ್ಯಾಯವಾಗಿ ಒಂದು ಪ್ರಬಲ ಶಕ್ತಿಯಾಗಿ ಹೊರಹೊಮ್ಮಿರುವ ಟಿವಿಕೆ ಆಡಳಿತ ಚುಕ್ಕಾಣಿ ಹಿಡಿಯಲು ಇದು ಪೂರಕವಾಗಲಿದೆ. ಸರಕಾರ ರಚಿಸಲು ಹತ್ತರೊಳಗಿನ ಸೀಟುಗಳ ಕೊರತೆ ಎದುರಿಸುತ್ತಿರುವ ಟಿವಿಕೆಗೆ ಕಾಂಗ್ರೆಸ್ ಬೆಂಬಲ ಸೂಚಿಸಿರುವುದು ವಿಜಯ್ ಮುಖದಲ್ಲಿ ಮಂದಹಾಸ ಮೂಡಿಸಿದೆ.ಕಾಂಗ್ರೆಸಿಗೆ ಕೊಡಬೇಕಿರುವ ಮಂತ್ರಿಸ್ಥಾನಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಹಳೆದೋಸ್ತಿಗಳಾದ ಡಿಎಂಕೆ ಮತ್ತು ಕಾಂಗ್ರೆಸ್ ಪರಸ್ಪರ ಮುಖ ತಿರುಗಿಸುತ್ತಿರುವುದು INDIA ಮೈತ್ರಿಕೂಟದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

Leave a Reply

Discover more from

Subscribe now to keep reading and get access to the full archive.

Continue reading