ಜಾಲ್ಸೂರು: ಇಲ್ಲಿನ ಸಮೀಪದ ರಸ್ತೆಯಲ್ಲಿ ಮಾರುತಿ 800 ಕಾರೊಂದು ಭೀಕರ ಅಪಘಾತಕ್ಕೀಡಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಚ್ಚುನೂರಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಪಕ್ಕದಲ್ಲಿದ್ದ ಮೈಲಿಗಲ್ಲಿಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ವೇಗವಾಗಿ ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯರು ಮತ್ತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

