ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಸುಳ್ಯದಲ್ಲಿ ಪ್ರತಿಭಟನಾ ರ‍್ಯಾಲಿ: ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕರೆ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಒತ್ತಾಯಿಸಿ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವತಿಯಿಂದ ಪ್ರತಿಭಟನಾ ರ‍್ಯಾಲಿಯನ್ನು ಆಯೋಜಿಸಲಾಗಿದೆ.

ಈ ಪ್ರತಿಭಟನಾ ರ‍್ಯಾಲಿಯು ಮೇ 15ರಂದು ಶುಕ್ರವಾರ ಸಂಜೆ 4 ಗಂಟೆಗೆ ಸುಳ್ಯದ ಗಾಂಧಿನಗರ ಪೆಟ್ರೋಲ್ ಬಂಕ್‌ನಿಂದ ಆರಂಭಗೊಂಡು ಬಸ್ ಸ್ಟ್ಯಾಂಡ್‌ವರೆಗೆ ಸಾಗಲಿದೆ.

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯುಂಟು ಮಾಡುವ ಗಂಭೀರ ವಿಚಾರವಾಗಿದ್ದು, ಪ್ರಾಮಾಣಿಕವಾಗಿ ಶ್ರಮಿಸುವ ವಿದ್ಯಾರ್ಥಿಗಳ ಹಕ್ಕುಗಳಿಗೆ ಅನ್ಯಾಯವಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಪ್ರತಿಭಟನಾ ರ‍್ಯಾಲಿ ಮಹತ್ವದ್ದಾಗಿದೆ ಎಂದು ಸಂಘಟನೆ ತಿಳಿಸಿದೆ.

ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭಟನಾ ರ‍್ಯಾಲಿಯನ್ನು ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷ ರಿಯಾನ್ ಸಅದಿ ಬೆಳ್ಳಾರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading