ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಅಜ್ಜಾವರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಅಡ್ಪಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇಲಾಖೆಯ ಆದೇಶದಂತೆ ಈ ಕಾರ್ಯಕ್ರಮವು ದಿನಾಂಕ 20-05-2026ನೇ ಬುಧವಾರ ಪೂರ್ವಾಹ್ನ 10:30ಕ್ಕೆ ಅಡ್ಪಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಸಮಸ್ತ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶಾಲೆಯ ಮುಖ್ಯ ಗುರುಗಳು ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


