ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಭಾನುವಾರ ನಡೆದಿದೆ. ಮೃತರನ್ನು ಕೊಡಗು ಸಿದ್ಧಾಪುರ ಕೂಡುಗದ್ದೆ ನಿವಾಸಿ ಮಧುಸೂಧನ್ ಅವರ ಪುತ್ರ ಅಭಿಜಿತ್ (21) ಎಂದು ಗುರುತಿಸಲಾಗಿದೆ.
ಅಭಿಜಿತ್ ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಕುಟುಂಬದವರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ


