ನಾಳೆ (ಮೇ.19)ಪವರ್ ಕಟ್: ಸುಳ್ಯ ತಾಲೂಕಿನ ಎಲ್ಲೆಲ್ಲಿ ಕರೆಂಟಿಲ್ಲ?

ಸುಳ್ಯದಲ್ಲಿ ಮೇ 19ರ ಮಂಗಳವಾರದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಉಪವಿಭಾಗದ ಪ್ರಕಟಣೆ ತಿಳಿಸಿದೆ. 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇದರ ಅನ್ವಯ 11 ಕೆ.ವಿ. ಅಜ್ಜಾವರ ಮತ್ತು ಮಂಡೆಕೋಲು ಫೀಡರುಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯ ತನಕ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Leave a Reply

Discover more from

Subscribe now to keep reading and get access to the full archive.

Continue reading