ಅರಂತೋಡಿನಲ್ಲಿ ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿ: ಇತ್ತಂಡಗಳಿಂದ ಪರಸ್ಪರ ದೂರು ದಾಖಲು

ಸುಳ್ಯ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಅರಂತೋಡು ಎಂಬಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇತ್ತಂಡಗಳು ಪರಸ್ಪರ ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ.

ಅರಂತೋಡು ಮರ್ಕಂಜ ಕ್ರಾಸ್ ರಸ್ತೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಪ್ರವೇಶಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ನಡುವೆ ಈ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಸ್ಕೂಟರಿನಲ್ಲಿ ಪಯಣಿಸುತ್ತಿದ್ದ ಹಿತಾಶ್ರೀ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದಲ್ಲಿ ಭಾಗಿಯಾದ ಕಾರಿನ ನಂಬ್ರ KA19MP5829 ಆಗಿದ್ದು, ದ್ವಿಚಕ್ರ ವಾಹನದ ನಂಬರ್ KA21V2769 ಆಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರಿನಲ್ಲಿದ್ದವರು ಸ್ಕೂಟರಿನಲ್ಲಿ ಮೂವರು ಪಯಣಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಸದ್ಯ ಇತ್ತಂಡಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪರಸ್ಪರ ಎಫ್ ಐ ಆರ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading