ಪೆರಾಜೆ ಬೈಕುಗಳ ನಡುವೆ ಡಿಕ್ಕಿ: ಒಬ್ಬ ಸಾವು, ಇಬ್ಬರಿಗೆ ಗಂಭೀರ ಗಾಯ

ಮಾಣಿ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪೆರಾಜೆ ಎಂಬಲ್ಲಿ ಎರಡು ಬೈಕುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕೇರಳ ಮೂಲದ ಸವಾರರೊಬ್ಬರು ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಅಪಘಾತದ ಭೀಕರತೆಗೆ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಕೇರಳ ಮೂಲದವರೆಂದು ಗುರುತಿಸಲಾಗಿದ್ದು, ಅವರ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.


ಘಟನೆಯಲ್ಲಿ ಮತ್ತೊಂದು ಬೈಕಿನಲ್ಲಿದ್ದ ರವಿ ಕುಮಾರ್ ಹಾಗೂ ಸುಮನ್ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ತೀವ್ರತೆಗೆ ಎರಡೂ ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

Leave a Reply

Discover more from

Subscribe now to keep reading and get access to the full archive.

Continue reading