ಮಾಣಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಇಂದು (ಮೇ 25) ಮೀನಿನ ಲಾರಿ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುಳ್ಯ ಮೂಲದ ಖಲಂದರ್ ಷಾ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮೀನಿನ ಲಾರಿಗೆ ಖಲಂದರ್ ಷಾ ಅವರ ಸ್ಕೂಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸವಾರ ತೀವ್ರವಾಗಿ ಗಾಯಗೊಂಡು ಮೆಡ್ ಲಾಂಡ್ ಹಾಸ್ಪಿಟಲಿಗೆ ಕರೆತರಲಾಗಿದ್ದು ಕೊನೆಯುಸಿರೆಳೆದಿದ್ದಾರೆ. ಅಪಘಾತದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


