ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಮೇ 26ರ ಮಂಗಳವಾರದಂದು ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ.


ಈ ಕಾರಣದಿಂದಾಗಿ 11 ಕೆ.ವಿ. ಸುಳ್ಯ-1, ಕೇರ್ಪಳ, ಡಿಪೋ, ತೋಡಿಕಾನ, ಕೊಲ್ಲಮೊಗ್ರು, ಉಬರಡ್ಕ ಹಾಗೂ ಕಲ್ಲುಗುಂಡಿ ಫೀಡರುಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಇಲಾಖೆಯ ಪ್ರಕಟಣೆ ಸಾರ್ವಜನಿಕರಿಗೆ ಮಾಹಿತಿ ನೀಡಿದೆ.



