ಕೇರಳದ ನೂತನ ಶಾಸಕ ಸಿರಿಯಕ್ ಥಾಮಸ್ ಅವರಿಗೆ ಜಾನಿ ಕೆ.ಪಿ ಅಭಿನಂದನೆ ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರು ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಶ್ರೀ ಜಾನಿ ಕೆ.ಪಿ ಅವರು, ಕೇರಳದ ಪೀರುಮೇಡ್ ವಿಧಾನಸಭಾ ಕ್ಷೇತ್ರದಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಶ್ರೀ ಸಿರಿಯಕ್ ಥಾಮಸ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಶಾಸಕ ಸಿರಿಯಕ್ ಥಾಮಸ್ ಅವರ ಸ್ವಗೃಹಕ್ಕೆ ಭೇಟಿ ನೀಡಿದ ಜಾನಿ ಕೆ.ಪಿ ಅವರು, ಶಾಸಕರಿಗೆ ಶಾಲು ಹೊದಿಸಿ, ಸಿಹಿ ನೀಡಿ ಆತ್ಮೀಯವಾಗಿ ಗೌರವಿಸಿದರು. ಪೀರುಮೇಡ್ ಕ್ಷೇತ್ರದ ಜನತೆ ಸಿರಿಯಕ್ ಥಾಮಸ್ ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಅವರನ್ನು ಆರಿಸಿ ಕಳುಹಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಮುಂಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿರಲಿ ಎಂದು ಆಶಿಸಿದರು.


ಅಭಿನಂದನಾ ಭೇಟಿಯ ನಂತರ ಉಭಯ ನಾಯಕರು ಪ್ರಸ್ತುತ ದೇಶದ ಹಾಗೂ ನೆರೆರಾಜ್ಯಗಳ ರಾಜಕೀಯ ಸನ್ನಿವೇಶಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ರಾಜಕೀಯ ಬೆಳವಣಿಗೆಗಳು ಹಾಗೂ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.


ಇದರೊಂದಿಗೆ ಕರ್ನಾಟಕದಲ್ಲಿ ಜಾರಿಯಲ್ಲಿರುವ ಕಾರ್ಮಿಕ ಕಲ್ಯಾಣ ಯೋಜನೆಗಳು ಹಾಗೂ ಉಭಯ ರಾಜ್ಯಗಳ ಗಡಿಭಾಗದ ಜನರ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳಿಗೆ ಪೂರಕವಾಗಿ ಕೆಲಸ ಮಾಡುವ ಕುರಿತು ಚರ್ಚಿಸಲಾಯಿತು. ಈ ಸೌಹಾರ್ದಯುತ ಭೇಟಿಯು ಉಭಯ ನಾಯಕರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದು, ಪಕ್ಷದ ಸಂಘಟನೆಗೆ ಹೊಸ ಚೇತನ ನೀಡುವಂತಿದೆ ಎಂದು ಜಾನಿ ಕೆ ಪಿ ಅವರು ತಿಳಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading