ಮರ್ಕಂಜದ ಹದಿನೇಳು ವರ್ಷದ ಬಾಲಕಿ ನಾಪತ್ತೆ: ಪೋಲೀಸ್ ದೂರು

ಮರ್ಕಂಜ ಗ್ರಾಮದ 17 ವರ್ಷದ ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬಳ್ಳಕಾನ ನಿವಾಸಿ ಐತಪ್ಪ ನಾಯ್ಕ ಎಂಬುವವರ ಪುತ್ರಿ ಕೀರ್ತನಾ ನಾಪತ್ತೆಯಾದ ಬಾಲಕಿ. ಮೇ 5 ರಂದು ಬೆಳಿಗ್ಗೆ 10:30ಕ್ಕೆ ಮನೆಯಿಂದ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಹೋದವರು ಈವರೆಗೆ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಬಾಲಕಿಯ ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಕಾಣೆಯಾದ ಬಾಲಕಿಯು ಸುಮಾರು 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆಯಲ್ಲಿ ಮಾತನಾಡಬಲ್ಲವರಾಗಿದ್ದಾರೆ. ಕಾಣೆಯಾಗುವ ಸಂದರ್ಭದಲ್ಲಿ ಹಳದಿ ಬಣ್ಣದ ಟಾಪ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇವರ ಬಗ್ಗೆ ಯಾವುದೇ ಮಾಹಿತಿ ಲಭಿಸಿದ್ದಲ್ಲಿ ಸ್ಥಳೀಯ ಠಾಣೆಗೆ ಅಥವಾ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪ್ರಕಟಣೆ ಮೂಲಕ ವಿನಂತಿಸಲಾಗಿದೆ.

Leave a Reply

Discover more from

Subscribe now to keep reading and get access to the full archive.

Continue reading