ಸುಳ್ಯ ಮುಖ್ಯ ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ ಆರಂಭ

ಸುಳ್ಯದ ಸಾರ್ವಜನಿಕರಿಗೆ ಒಂದು ಪ್ರಮುಖ ಮಾಹಿತಿ ಲಭ್ಯವಾಗಿದೆ. ಸುಳ್ಯದ ಮುಖ್ಯ ಅಂಚೆ ಕಚೇರಿಯಲ್ಲಿ ಈಗ ಆಧಾರ್ ಕಾರ್ಡ್ ಸೇವೆಗಳನ್ನು ಅಧಿಕೃತವಾಗಿ ಆರಂಭಿಸಲಾಗಿದ್ದು, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ.

ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ವಿವಿಧ ಕೆಲಸಗಳಿಗಾಗಿ ಸಾರ್ವಜನಿಕರು ಅನುಕೂಲ ಆಗಲು ಈ ವ್ಯವಸ್ಥೆ ಮಾಡಲಾಗಿದೆ

ಹೊಸದಾಗಿ ಆಧಾರ್ ಕಾರ್ಡ್ ಮಾಡಿಸಬೇಕಾದವರಿಗೆ ಇಲ್ಲಿ ಹೊಸ ಆಧಾರ್ ನೋಂದಣಿ ಮಾಡಿಸಲು ಅವಕಾಶವಿದೆ. ಇದರೊಂದಿಗೆ ಆಧಾರ್ ಕಾರ್ಡ್‌ನಲ್ಲಿರುವ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಹುಟ್ಟಿದ ದಿನಾಂಕದಲ್ಲಿ ಯಾವುದೇ ತಪ್ಪುಗಳಿದ್ದರೆ ಅವುಗಳನ್ನು ಇಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬಹುದು.

ಅಷ್ಟೇ ಅಲ್ಲದೆ, ಮಕ್ಕಳ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಪ್ರಕ್ರಿಯೆಯನ್ನು ಕೂಡ ಇಲ್ಲಿ ಸುಲಭವಾಗಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಈ ಪ್ರಮುಖ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಅಧಿಕೃತರು ತಿಳಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading