ಮಾನ್ಯ ಮುಖ್ಯಮಂತ್ರಿಗಳಾಗಿದ್ದ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ಇದೀಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಈ ದಿನ ಇಡೀ ಸಚಿವ ಸಂಪುಟವೇ ಪುನಾರಚನೆ ಆಗುತ್ತಿದ್ದು ಪ್ರಿಯಾಂಕ್ ಖರ್ಗೆ ಅವರು ಗೃಹಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಇವತ್ತು ಡಿ ಕೆ ಶಿ ಜತೆ ಪ್ರಮಾಣ ವಚನ ಸ್ವೀಕರಿಸಲಿರುವ ಹದಿನಾಲ್ಕು ಸಚಿವರ ಪಟ್ಟಿ ಬಿಡುಗಡೆ ಆಗಿದ್ದು, ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

ತಮ್ಮ ದೃಢ ನಿಲುವುಗಳ ಮೂಲಕ ಮತ್ತು ಸೈದ್ಧಾಂತಿಕ ಬದ್ಧತೆಯಿಂದ ಅಪಾರ ಅಭಿಮಾನಿಗಳನ್ನು ಸೃಷ್ಟಿಸಿಕೊಂಡಿರುವ ಪ್ರಿಯಾಂಕ್ ಖರ್ಗೆ ಸಚಿವರಾಗಿ ಆಯ್ಕೆ ಆಗುತ್ತಿರುವುದು ಪ್ಯಾಸಿಸಮ್ ವಿರುದ್ಧ ಹೋರಾಡುತ್ತಿರುವ ಜನರಲ್ಲಿ ಅಪಾರ ಹರ್ಷಕ್ಕೆ ಕಾರಣವಾಗಿದೆ.




