ಮುಖ್ಯಮಂತ್ರಿಯಾಗಿ ಪ್ರಮಾಣವಚನ‌ ಸ್ವೀಕರಿಸುತ್ತಲೇ ಡಿಕೆಶಿ ಕಡೆಯಿಂದ ರಾಜ್ಯದ ಜನತೆಗೆ ಬಂಪರ್!

ನೂತನ ಮುಖ್ಯಮಂತ್ರಿಗಳ ನೇತೃತ್ವದಲ್ಲಿ  ಅಧಿಕಾರ ವಹಿಸಿಕೊಂಡು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಕಡೆಯಿಂದ ಜನರಿಗೆ ಭರ್ಜರಿ ಕೊಡುಗೆಗಳು ಲಭ್ಯವಾಗಿವೆ.

ಸರ್ಕಾರ ರಚನೆಯಾದ ಮೊದಲ ದಿನವೇ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಪ್ರಮುಖ ಮತ್ತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಅವುಗಳ ವಿವರ ಇಲ್ಲಿದೆ.

ರಾಜ್ಯದ ನಿರುದ್ಯೋಗಿ ಯುವಕರಿಗೆ ಆಸರೆಯಾಗುವ ನಿಟ್ಟಿನಲ್ಲಿ ಉದ್ಯೋಗ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಘೋಷಿಸಲಾಗಿದೆ.

ಇನ್ನು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ಎರಡು ಸಾವಿರ ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಡಲಾಗಿದೆ.

ಗ್ರಾಮೀಣ ಮಟ್ಟದಲ್ಲಿ ಯುವಕರ ಸಬಲೀಕರಣಕ್ಕಾಗಿ ಭಾರತ್ ಜೋಡೋ ಯುವ ಸಂಘವನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಈ ಯೋಜನೆಯ ಮೂಲಕ ಪ್ರತಿ ಪಂಚಾಯತ್‌ಗೆ ಹತ್ತು ಲಕ್ಷ ರೂಪಾಯಿಗಳ ಕೊಡುಗೆಯನ್ನು ನೀಡಲಾಗುತ್ತದೆ.

ಕೊನೆಯದಾಗಿ, ಆಸ್ತಿ ಮಾಲೀಕರಿಗೆ ದೊಡ್ಡ ರಿಲೀಫ್ ನೀಡುವ ನಿಟ್ಟಿನಲ್ಲಿ ಬಿ ಖಾತಾದಿಂದ ಎ ಖಾತಾ ಬದಲಾಯಿಸುವ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 2500 ಚದರ ಅಡಿ ವಿಸ್ತೀರ್ಣದ ಕಟ್ಟಡ ಕಟ್ಟುವವರಿಗೆ ನಿಯಮಗಳನ್ನು  ಸಡಿಲಗೊಳಿಸಿ ನಿರಾಳತೆ ನೀಡಿದೆ.

 

Leave a Reply

Discover more from

Subscribe now to keep reading and get access to the full archive.

Continue reading