ಇಲಿ ಪಾಷಾಣ ಸೇವಿಸಿದ್ದ ಯುವಕ ಮೃತ್ಯು

ಕುಕ್ಕುಜಡ್ಕದಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದ ಜಟ್ಟಿಪಳ್ಳದ ಯುವಕ ಉಮೇಶ (32) ಒಂದು ವಾರದ ಹಿಂದೆ ಇಲಿ ಪಾಷಾಣ ಸೇವಿಸಿದ್ದು  ಇದೀಗ ಮೃತರಾಗಿದ್ದಾರೆ.

ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆನ್ನಲಾಗಿದ್ದು ಕಳೆದ ಶನಿವಾರ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೊದಲು ಸುಳ್ಯ, ಮತ್ತೆ ಮಂಗಳೂರಿನ ಹಾಸ್ಪಿಟಲಿಗೆ ಕರೆತಂದು ಚಿಕಿತ್ಸೆ ನೀಡಲಾಗಿದ್ದು ನಂತರ ಎರಡು ದಿನಗಳ ಹಿಂದೆ ಮಂಗಳೂರಿನಿಂದ ಕರೆತಂದು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಮೃತರು ತಾಯಿ, ಸಹೋದರ, ಸಹೋದರಿ ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading