ದೇವಚಳ್ಳ: ಇಲ್ಲಿನ ಮೆತ್ತಡ್ಕ ನಿವಾಸಿ, ದೇವಚಳ್ಳ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾದ ಮೆತ್ತಡ್ಕ ನಾಗಪ್ಪ ಗೌಡ (80 ವರ್ಷ) ಅವರು ಅಲ್ಪಕಾಲದ ಅಸ್ವಸ್ಥತೆಯಿಂದಾಗಿ ಇಂದು ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ದೇವಚಳ್ಳ ಗ್ರಾಮ ಪಂಚಾಯತ್‌ನಲ್ಲಿ ಸದಸ್ಯರಾಗಿ ಸಕ್ರಿಯ ಸೇವೆ ಸಲ್ಲಿಸಿದ್ದರು.
ಮೃತರು ಪುತ್ರರಾದ ಮಾಜಿ ಗ್ರಾಮಪಂಚಾಯತ್ ಸದಸ್ಯ ದುರ್ಗಾದಾಸ್ ಮೆತ್ತಡ್ಕ, ದಯಾನಂದ ಮೆತ್ತಡ್ಕ ಹಾಗೂ ಐದು ಜನ ಪುತ್ರಿಯರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಗ್ರಾಮಸ್ಥರು ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.






