ಅರಂತೋಡು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ವೈದ್ಯಾಧಿಕಾರಿಯಾಗಿ ಡಾ ಮೊಹಮ್ಮದ್ ಫೈಝಲ್ ಅವರು ಗುತ್ತಿಗೆ ಆಧಾರದ ಮೇಲೆ ಅಧಿಕಾರ ವಹಿಸಿಕೊಂಡು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಮೂಲತಃ ಉಳ್ಳಾಲ ಕೋಟೆಪುರದವರಾದ ಇವರು ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜಿನಲ್ಲಿ ತಮ್ಮ ಎಂಬಿಬಿಎಸ್ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರುತ್ತಾರೆ.
ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೊಸ ವೈದ್ಯಾಧಿಕಾರಿಗಳ ಆಗಮನದಿಂದ ಈ ಭಾಗದ ಸಾರ್ವಜನಿಕರಿಗೆ ಮತ್ತು ಗ್ರಾಮೀಣ ಜನರಿಗೆ ಇನ್ನಷ್ಟು ಉತ್ತಮ ಆರೋಗ್ಯ ಸೇವೆ ದೊರೆಯುವ ನಿರೀಕ್ಷೆಯಿದೆ.

