ನ್ಯಾಯವಾದಿ ನಾರಾಯಣ ಜಟ್ಟಿಪಳ್ಳರ ಪತ್ನಿ ಪ್ರೇಮಾ ನಿಧನ


ಸುಳ್ಯದ ಜಟ್ಟಿಪಳ್ಳ ನಿವಾಸಿಯಾದ ನ್ಯಾಯವಾದಿ ನಾರಾಯಣ ಜಟ್ಟಿಪಳ್ಳ ಅವರ ಧರ್ಮಪತ್ನಿ ಶ್ರೀಮತಿ ಪ್ರೇಮಾ (41 ವರ್ಷ) ಅವರು ಅನಾರೋಗ್ಯದ ಕಾರಣದಿಂದಾಗಿ ಜೂನ್ 10 ರಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗಿಯಾಗಿದ್ದ ಇವರು, ಇತ್ತೀಚಿನ ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಇವರು ಜಟ್ಟಿಪಳ್ಳ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಮೃತರು ತಮ್ಮ ಪತಿ, ಸುಳ್ಯ ನಗರ ಪಂಚಾಯತ್‌ನ ಮಾಜಿ ಸದಸ್ಯರೂ ಆಗಿರುವ ನಾರಾಯಣ ಜಟ್ಟಿಪಳ್ಳ ಹಾಗೂ ಗ್ರೀಷ್ಮ ಮತ್ತು ಜಶ್ಮಿತಾ ಎಂಬ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading