
ಗಾಳಿಯ ಅಬ್ಬರಕ್ಕೆ ತೆಂಗಿನ ಮರ ಬಿದ್ದು ವ್ಯಕ್ತಿ ನಿಧನರಾದ ಘಟನೆ ಕುಂಬಳೆ ಸಮೀಪದ ಪೆರುವಾಡ್ ಮೈದಾನದ ಬಳಿ ನಡೆದಿದೆ. ಬಲವಾದ ಗಾಳಿಯ ಅಬ್ಬರಕ್ಕೆ ತೆಂಗಿನ ಮರವೊಂದು ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಪೆರುವಾಡು ನಿವಾಸಿಯಾದ ಅಬ್ದುಲ್ಲಾ (65) ಎಂಬುವವರೇ ಮೃತಪಟ್ಟ ದುರ್ದೈವಿ. ಇವರು ಪೆರುವಾಡು ಜುಮಾ ಮಸೀದಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ವೃತ್ತಿಯಲ್ಲಿ ಮೀನುಗಾರರಾಗಿದ್ದರು.

ಘಟನೆ ನಡೆಯುವ ಸಮಯದಲ್ಲಿ ಅಬ್ದುಲ್ಲಾ ಅವರು ತಮ್ಮ ಸ್ನೇಹಿತರಾದ ಇಬ್ರಾಹಿಂ ಮತ್ತು ಹಸೈನಾರ್ ಅವರೊಂದಿಗೆ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಮರ ಮುರಿಯುವ ಶಬ್ದ ಕೇಳಿ ಇಬ್ಬರು ಸ್ನೇಹಿತರು ತಕ್ಷಣವೇ ಅಲ್ಲಿಂದ ಓಡಿ ಹೋಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮರ ಬಿದ್ದ ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಅಬ್ದುಲ್ಲಾ ಅವರನ್ನು ಆಸ್ಪತ್ರೆಗೆ ತಲುಪಿಸಲಾಯಿತಾದರೂ, ಜೀವ ಉಳಿಸಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


