ಕಾಸರಗೋಡು: ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ಕಾಸರಗೋಡಿನಲ್ಲಿ ಬೆಳಕಿಗೆ ಬಂದಿದೆ.
ಭಾರತೀಯ ದಂಡಸಂಹಿತೆ ಮತ್ತು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ತಳಿಪರಂಬದ ಪುಳಿಪರಂಬ ನಿವಾಸಿಯಾದ ಸ್ನೇಹಾ ಮೆರ್ಲಿನ್ ಎಂಬ ಇಪ್ಪತ್ತೈದು ವರ್ಷದ ಯುವತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತ ಹದಿನಾರು ವರ್ಷದ ಬಾಲಕಿಯು ಈಕೆಯ ತಾಯಿಯ ಸ್ನೇಹಿತೆಯಾಗಿದ್ದಳು ಎಂದು ತಿಳಿದುಬಂದಿದೆ. ಬಾಲಕಿಯ ತಾಯಿಯೊಂದಿಗಿನ ಸ್ನೇಹದ ಹಿನ್ನೆಲೆಯಲ್ಲಿ ಈಕೆ ಮನೆಗೆ ಬಂದು ಹೋಗುತ್ತಿದ್ದಳು ಎನ್ನಲಾಗಿದೆ.

ಬಂಧಿತ ಆರೋಪಿ ಸ್ನೇಹಾ ಮೆರ್ಲಿನ್ ವಿರುದ್ಧ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ನಾಲ್ಕು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.



