ಮಾವಿನ ಹಣ್ಣು ಸೇವಿಸಿ ಸಹೋದರಿಯರ ಮೃತ್ಯು

ಬೀದರ್: ಮಾವಿನ ಹಣ್ಣು ಸೇವಿಸಿದ ಬೆನ್ನಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತಪಟ್ಟ ಬಾಲಕಿಯರು ಭವಾನಿ ವೈಜಿನಾಥ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14) ಎಂದು ತಿಳಿದು ಬಂದಿದೆ.

ಅಸ್ವಸ್ಥಗೊಂಡ ಕುಟುಂಬದ ಸದಸ್ಯರನ್ನು ತಕ್ಷಣವೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಾವಿನ ಹಣ್ಣು ಸೇವಿಸಿದ ನಂತರವೇ ಈ ದುರಂತ ಸಂಭವಿಸಿರುವುದರಿಂದ, ಹಣ್ಣಿನಲ್ಲಿ ವಿಷಕಾರಿ ಅಂಶವಿತ್ತೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಕುರಿತು ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯರ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣವೇನು ಎಂಬುದು ತಿಳಿದು ಬರಬೇಕಿದೆ.

Leave a Reply

Discover more from

Subscribe now to keep reading and get access to the full archive.

Continue reading