ಅಟೋರಿಕ್ಷಾ ಪಲ್ಟಿ: ಚಾಲಕನಿಗೆ ಗಾಯ


ಸುಳ್ಯ ಸಮೀಪದ ನಾವುರು ಜಂಕ್ಷನ್ ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.


ಈ ಅಪಘಾತದಲ್ಲಿ ಆಟೋ ಚಾಲಕ ಗಾಯಗೊಂಡಿದ್ದು, ತಕ್ಷಣವೇ ಸ್ಪಂದಿಸಿದ ಸ್ಥಳೀಯರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಆಟೋ ಮುಂಭಾಗ ಜಖಂಗೊಂಡಿದೆ.

Leave a Reply

Discover more from

Subscribe now to keep reading and get access to the full archive.

Continue reading