ಬೇಗುಸರಾಯ್‌ನಲ್ಲಿ ಭೀಕರ ಕೃತ್ಯ: ಗಂಡನನ್ನು ರೂಮಿನಲ್ಲಿ ಕೂಡಿಹಾಕಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಗುಪ್ತಾಂಗದಲ್ಲಿ ಬುಲೆಟ್, ಕಲ್ಲು ಪತ್ತೆ!

ಮಾನವಕುಲವೇ ತಲೆತಗ್ಗಿಸುವಂತಹ ಅತ್ಯಂತ ಕ್ರೂರ ಮತ್ತು ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮಧ್ಯರಾತ್ರಿ ಮನೆಗೆ ನುಗ್ಗಿದ ಐದು ಜನರ ದುಷ್ಕರ್ಮಿಗಳ ತಂಡವೊಂದು, ಪತಿಯನ್ನು ಕೋಣೆಯಲ್ಲಿ ಕೂಡಿಹಾಕಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಬೇಗುಸರಾಯ್  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಜೂನ್ 11ರ ಮಧ್ಯರಾತ್ರಿ ಈ ಭೀಕರ ಘಟನೆ ನಡೆದಿದೆ.

ರಾತ್ರಿ ಸುಮಾರು 11:30ರ ಅವಧಿಯಲ್ಲಿ ಸಂತ್ರಸ್ತ ಮಹಿಳೆ ಶೌಚಾಲಯಕ್ಕೆ ತೆರಳಿದ್ದ ಸಂದರ್ಭವನ್ನು ಬಳಸಿಕೊಂಡ ಐದು ಜನರ ಸಶಸ್ತ್ರ ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿದೆ. ಮೊದಲು ಮನೆಯಲ್ಲಿ ಮಲಗಿದ್ದ ಮಹಿಳೆಯ ಪತಿಯನ್ನು ಹೊರಗಿನಿಂದ ಕೋಣೆಗೆ ಹಾಕಿ ಬೀಗ ಹಾಕಿದ್ದಾರೆ. ಆನಂತರ ಶೌಚಾಲಯದಿಂದ ಹಿಂತಿರುಗಿದ ಮಹಿಳೆಯನ್ನು ಬಲವಂತವಾಗಿ ಹಿಡಿದು, ಆಕೆಯ ಮೇಲೆ ಐವರೂ ಸೇರಿ ಪಾಶವಿ ನೃತ್ಯ ಆಡಿದ್ದಾರೆ.



ಘಟನೆಯ ನಂತರ ಸಂತ್ರಸ್ತೆಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ನಡೆಸಿದ ತಪಾಸಣೆಯ ವೇಳೆ ಅತ್ಯಂತ ಆಘಾತಕಾರಿ ಮತ್ತು ಕ್ರೂರ ಸಂಗತಿಗಳು ಬೆಳಕಿಗೆ ಬಂದಿವೆ. ಕಾಮುಕರು ಮಹಿಳೆಯ ಮೇಲೆ ಕೇವಲ ಅತ್ಯಾಚಾರ ಎಸಗಿದ್ದಷ್ಟೇ ಅಲ್ಲದೆ, ಆಕೆಯ ಗುಪ್ತಾಂಗದೊಳಗೆ ಬಂದೂಕಿನ ಬುಲೆಟ್ (ಗುಂಡು), ಕಲ್ಲು ಮತ್ತು ಮರದ ತುಂಡನ್ನು ತುರುಕಿ ವಿಕೃತಿ ಮೆರೆದಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಸಂತ್ರಸ್ತೆಯ ದೇಹದಿಂದ ಈ ವಸ್ತುಗಳನ್ನು ಹೊರತೆಗೆದಿದ್ದಾರೆ. ಸದ್ಯ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.



ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಪೊಲೀಸರಿಗೆ ಸವಿಸ್ತಾರವಾದ ಹೇಳಿಕೆ ನೀಡಿದ್ದು, ಚಾಕಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಕಾನೂನು ಸುವ್ಯವಸ್ಥೆಯ ಪ್ರಶ್ನೆಯನ್ನು ಎತ್ತುವಂತೆ ಮಾಡಿರುವ ಈ ಘಟನೆ ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Leave a Reply

Discover more from

Subscribe now to keep reading and get access to the full archive.

Continue reading