ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ

ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಹೆಣ್ಣು ಮಗುವನ್ನು ಚೀಲದಲ್ಲಿ ಕಟ್ಟಿ, ಬಾಯಿಗೆ ಫೀಡಿಂಗ್ ಬಾಟಲ್ ಇಟ್ಟು ತೊರೆದು ಹೋಗಿರುವ ಘಟನೆ ನಡೆದಿದೆ.

ಗವಟೂರು ಹೊಳೆ ಸಮೀಪದ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ಈ ನವಜಾತ ಶಿಶು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಭಾನುವಾರ ರಾತ್ರಿ ಬಸ್ ನಿಲ್ದಾಣದ ಬಳಿ ಸಾಗುತ್ತಿದ್ದ ದಾರಿಹೋಕರಿಗೆ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಮೊದಲಿಗೆ ಅದು ನಾಯಿ ಅಥವಾ ಬೆಕ್ಕಿನ ಮರಿ ಇರಬಹುದೆಂದು ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ, ಚೀಲದೊಳಗೆ ನವಜಾತ ಹೆಣ್ಣು ಮಗು ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಅವರು ರಿಪ್ಪನ್ ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಪಿಎಸ್ಐ ರಾಜು ರೆಡ್ಡಿ ಮತ್ತು ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಆ್ಯಂಬುಲೆನ್ಸ್ ಮೂಲಕ ಮಗುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಅಗತ್ಯ ಚಿಕಿತ್ಸೆ ನೀಡಿದ್ದಾರೆ. ವೈದ್ಯರ ಪ್ರಾಥಮಿಕ ಪರೀಕ್ಷೆಯಲ್ಲಿ ಮಗು ಆರೋಗ್ಯವಾಗಿರುವುದು ತಿಳಿದುಬಂದಿದೆ. ಹೆಚ್ಚಿನ ಆರೈಕೆಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Discover more from

Subscribe now to keep reading and get access to the full archive.

Continue reading