ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಜೋಗಿಮೂಲೆಯಲ್ಲಿ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ವೃದ್ಧರೊಬ್ಬರು ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಮೃತಪಟ್ಟ ದುರ್ದೈವಿಯನ್ನು ಚಂದ್ರಶೇಖರ ಗೌಡ ಎಂದು ಗುರುತಿಸಲಾಗಿದ್ದು, ಅವರಿಗೆ 65 ವರ್ಷ ವಯಸ್ಸಾಗಿತ್ತು. ಇವರು ಜುಲೈ 8ರಂದು ರಾತ್ರಿ ನಾಪತ್ತೆಯಾಗಿದ್ದರು. ಅವರಿಗಾಗಿ ಸ್ಥಳೀಯವಾಗಿ ಹುಡುಕಾಟ ನಡೆಸಲಾಗಿತ್ತು. ಇಂದು ತೋಟದ ತೋಡಿನಲ್ಲಿ ಅವರ ಶವ ಪತ್ತೆಯಾಗಿದೆ. ರಾತ್ರಿ ವೇಳೆ ಕಾಲು ಜಾರಿ ತೋಡಿಗೆ ಬಿದ್ದು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.









