ಶಾಂತಿನಗರದಲ್ಲಿ ಮತದಾರರ ಅನುಕೂಲಕ್ಕಾಗಿ SIR ಗಣತಿ ನಮೂನೆ ಭರ್ತಿ ಕಾರ್ಯಕ್ರಮ


ಸುಳ್ಯದ ಶಾಂತಿನಗರದ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಶಾಂತಿನಗರ ವಾರ್ಡ್‌ನ ಎಲ್ಲಾ ಮತದಾರರ ಅನುಕೂಲಕ್ಕಾಗಿ ವಿಶೇಷ ಗಣತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿಶೇಷ ತೀವ್ರ ಪರಿಷ್ಕರಣೆ (SIR – Special Intensive Revision) ಪ್ರಕ್ರಿಯೆಯ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ನೂರುಲ್ ಇಸ್ಲಾಂ ಮದ್ರಸ ವಠಾರದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 5:00 ಗಂಟೆಯ ತನಕ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸಲಾಯಿತು. ಶಾಂತಿನಗರ ವಾರ್ಡ್‌ನ ಮತದಾರರ ಅನುಕೂಲಕ್ಕಾಗಿ ಎನ್ಯೂಮರೇಷನ್ ಫಾರ್ಮ್ (ಗಣತಿ ನಮೂನೆ) ಅನ್ನು ಭರ್ತಿ ಮಾಡಿಕೊಡುವ ಮೂಲಕ, ಅದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೀಡಲಾಯಿತು.
ಕಾರ್ಯಕ್ರಮದ ಯಶಸ್ಸಿಗೆ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್, ನೂರುಲ್ ಇಸ್ಲಾಂ ಮದ್ರಸ ಹಾಗೂ ಸ್ವಲಾತ್ ಕಮಿಟಿ ಶಾಂತಿನಗರದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Leave a Reply

Discover more from

Subscribe now to keep reading and get access to the full archive.

Continue reading