ಗಾನ ಕೋಗಿಲೆ ಎಸ್ ಜಾನಕಿ‌ ವಿಧಿವಶ

ಸಂಗೀತ ಲೋಕದ ಗಾನಕೋಗಿಲೆ ಎಸ್. ಜಾನಕಿ ಅವರು ಇಂದು ಶನಿವಾರ ರಾತ್ರಿ 7:30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ.

ಕಳೆದ ಒಂದು ವಾರದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ ದಿಢೀರ್ ಕಾಣಿಸಿಕೊಂಡ ಕಾರ್ಡಿಯಾಕ್ ಅರೆಸ್ಟ್ ನಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಖ್ಯಾತ ಗಾಯಕಿಯ ಅಗಲಿಕೆಗೆ ಇಡೀ ಚಿತ್ರರಂಗ ಮತ್ತು ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. ಸದ್ಯ ಜಾನಕಿ ಅವರ ಅಂತ್ಯಸಂಸ್ಕಾರದ ಕುರಿತು ಅವರ ಕುಟುಂಬಸ್ಥರು ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಅಭಿಮಾನಿಗಳಿಗೆ ಮತ್ತು ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಭಾರತೀಯ ಚಿತ್ರರಂಗದ ಅಪರೂಪದ ಧ್ವನಿಯೊಂದು ಇವತ್ತು ಮೌನವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.

Leave a Reply

Discover more from

Subscribe now to keep reading and get access to the full archive.

Continue reading