ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಪತ್ನಿ ವಿಯೋಗ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (80 ವರ್ಷ) ಅವರು ಶನಿವಾರ (ಜುಲೈ 18) ಸಂಜೆ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬುಧವಾರ ರಾತ್ರಿ ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನಿಲ್ ಕಾರಂತ್ ನೇತೃತ್ವದ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸೇರಿದಂತೆ ದೇವೇಗೌಡರ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ವಿವಿಧ ರಾಜಕೀಯ ನಾಯಕರು ಮತ್ತು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading