





ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಪುತ್ತೂರಿನ ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿ ಪ್ರಜ್ಞಾ (26) ಎಂದು ಗುರುತಿಸಲಾಗಿದೆ. ಇವರು ಈಶ್ವರಮಂಗಳದಲ್ಲಿ ಕಮ್ಯುನಿಟಿ ಹೆಲ್ತ್ ಆಫೀಸರ್ (Community Health Officer) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದಷ್ಟೇ ಪ್ರಜ್ಞಾ ಅವರು ವೈಯಕ್ತಿಕ ಕಾರಣಗಳಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಯುವತಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.





