ಸುಳ್ಯ: ದೆಹಲಿ ಘಟನೆ
ಸುಳ್ಯ (22.07.2026): ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಹಾಗೂ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಗಳ ಪರವಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಹಿಂಸಾತ್ಮಕವಾಗಿ ಬಂಧಿಸಿದ ಕೇಂದ್ರ ಸರ್ಕಾರದ ನಡವಳಿಕೆಯನ್ನು ಖಂಡಿಸಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜುಲೈ 22ರಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿದ ನಾಯಕರನ್ನು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿದ ಕಾಂಗ್ರೆಸ್ ಮುಖಂಡರು, ವಿದ್ಯಾರ್ಥಿಗಳಿಗೆ ತಕ್ಷಣವೇ ನ್ಯಾಯ ಸಿಗಬೇಕೆಂದು ಆಗ್ರಹಿಸಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್ ಉದ್ಘಾಟಿಸಿ ಮಾತನಾಡಿ ದೇಶದ ಇಂದಿನ ತುರ್ತು ಪರಿಸ್ಥಿತಿ ಬಗ್ಗೆ ಎಚ್ಚರಿಸಿದರು. ಕಾಯರ್ತೋಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಲಕ್ಷ್ಮೀಶ ಗಬ್ಲಡ್ಕ ಮಾತನಾಡಿದರು.ಕಾರ್ಮಿಕ ಮಂಡಳಿ ಸದಸ್ಯ ಕೆ. ಪಿ ಜಾನಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ನೋಟರಿ ಫವಾಝ್ ಕನಕಮಜಲು, ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ಭಾಗವಹಿಸಿದ್ದರು.
ಅಲ್ಲದೆ, ನಗರ ಪಂಚಾಯತ್ ಮಾಜಿ ಸದಸ್ಯ ಶರೀಫ್ ಕಂಠಿ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ರಾಜೀವಿ ರೈ, ಗೀತಾ ಕೊಲ್ಚಾರ್, ಸುಂದರಿ ಸಂಪಾಜೆ, ಪಿ. ಎಸ್. ಗಂಗಾಧರ, ಪ್ರಚಾರ ಸಮಿತಿಯ ಗಫೂರ್ ಕಲ್ಮಡ್ಕ, ಧೀರಾ ಕ್ರಾಸ್ತ, ಮುಜೀಬ್ ಪೈಚಾರ್, ಹನೀಫ್ ಎಸ್. ಕೆ., ಸಿದ್ದೀಕ್ ಕೊಕ್ಕೋ, ರಾಜು ಪಂಡಿತ್, ಕುರುಂಜಿ ಉಮ್ಮರ್, ರಂಜಿತ್ ರೈ ಮೇನಾಲ, ಪ್ರಸಾದ್ ರೈ ಮೇನಾಲ, ಸಾಮಾಜಿಕ ಜಾಲತಾಣದ ಅಬ್ಬಾಸ್ ಎ. ಬಿ, ಸತ್ಯಕುಮಾರ್ ಅಡಿಂಜ, ಧನುಷ್ ಕುಕ್ಕೆಟ್ಟಿ, ಮನ್ಸೂರ್ ಮೆಟ್ರೋ, ಮಹೇಶ್ ಬೆಳ್ಳಾರ್ಕರ್, ಜುನೈದ್ ಅಡ್ಕಾರ್, ಝುಬೈರ್ ಅರಂತೋಡ್, ರಾಧಾ ಪರಿವಾರಕಾನ, ನಂದರಾಜ ಸಂಕೇಶ, ಶ್ರೀಹರಿ ಕುಕ್ಕುಡೇಲು ಹಾಗೂ ನೂರಾರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

