ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಬಂಧನ: ಕೇಂದ್ರ ಸರ್ಕಾರದ ವಿರುದ್ಧ ಟಿ.ಎಂ. ಶಾಹೀದ್ ತೆಕ್ಕಿಲ್ ತೀವ್ರ ಖಂಡನೆ

ನವದೆಹಲಿಯ ಪ್ರಧಾನಿ ನಿವಾಸದ ಬಳಿ ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹೀದ್ ತೆಕ್ಕಿಲ್ ತೀವ್ರವಾಗಿ ಖಂಡಿಸಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ವಿರೋಧಿಸಿ, ನ್ಯಾಯ ಕೇಳಲು ಮುಂದಾದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡುತ್ತಿದೆ. ಇದು ಅಘೋಷಿತ ತುರ್ತುಪರಿಸ್ಥಿತಿಯನ್ನು ನೆನಪಿಸುವ ಸರ್ವಾಧಿಕಾರಿ ಧೋರಣೆಯಾಗಿದೆ,” ಎಂದು ಟಿ.ಎಂ ಶಾಹೀದ್ ತೆಕ್ಕಿಲ್ ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಹೊಣೆಹೊತ್ತು ಸಂಬಂಧಪಟ್ಟ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಹಾಗೂ ವಶಕ್ಕೆ ಪಡೆಯಲಾದ ಎಲ್ಲಾ ಕಾಂಗ್ರೆಸ್ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading