ಅಜ್ಜಾವರ: ಗೃಹಲಕ್ಷ್ಮಿ ಯೋಜನೆಗೆ 3 ವರ್ಷ ತುಂಬಿದ ಹಿನ್ನೆಲೆ—ಜಾಗೃತಿ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮ


ಅಜ್ಜಾವರ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಯಶಸ್ವಿಯಾಗಿ 3 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸೂಚನೆಯಂತೆ ಇಂದು ಅಜ್ಜಾವರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಮತ್ತು ಅಜ್ಜಾವರ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಹಣ್ಣಿನ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಹಾಗೂ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾದ ಲೀಲಾ ಮನ್ಮೋಹನ್ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣ ಮತ್ತು ಸಮಾಜ ನಿರ್ಮಾಣದ ಕಲ್ಯಾಣ ಕಾರ್ಯಕ್ರಮವಾಗಿ ಜಾರಿಯಾದ ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಅವರ ಕುಟುಂಬಗಳು ಆರ್ಥಿಕವಾಗಿ ಸದೃಢಗೊಂಡಿವೆ ಎಂದರು. ಅಜ್ಜಾವರ ಗ್ರಾಮ ಒಂದರಲ್ಲೇ ಇದುವರೆಗೆ 8,76,66,800 ರೂಪಾಯಿ ಮೊತ್ತವು ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ತಲುಪಿದೆ. ಈ ಯೋಜನೆಯನ್ನು ಸರ್ಕಾರ ನಿರಂತರವಾಗಿ ಮುಂದುವರಿಸಲು ಬದ್ಧವಾಗಿದೆ ಎಂದು ಲೀಲಾ ಮನ್ಮೋಹನ್ ತಿಳಿಸಿದರು.
ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕರ್ಲಪ್ಪಾಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸಾದ್ ರೈ ಮೇನಾಲ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಂಜಿತ್ ರೈ ಮೇನಾಲ ಅವರು ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿ ಶುಭಹಾರೈಸಿದರು. ಸುಳ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಅಬ್ಬಾಸ್ AB ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ದುಲ್ಲ ಅಜ್ಜಾವರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲಾ, ಪಂಚಾಯತ್ ಸಿಬ್ಬಂದಿವರ್ಗ, ಅಬ್ದುಲ್ಲ G. ಅಜ್ಜಾವರ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Discover more from

Subscribe now to keep reading and get access to the full archive.

Continue reading