ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಕೆ.ಪಿ ಜಾನಿಯವರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರವಾಸ


ಕೋಲಾರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರು ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿಗಳಾದ ಕೆ.ಪಿ. ಜಾನಿ ಅವರು ಇತ್ತೀಚೆಗೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು.
ನೂತನವಾಗಿ ರಚನೆಗೊಂಡ ಪ್ರಚಾರ ಸಮಿತಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪಕ್ಷ ಸಂಘಟನಾ ಕಾರ್ಯಗಳಿಗೆ ಚುರುಕು ಮುಟ್ಟಿಸಿ, ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರ ಜವಾಬ್ದಾರಿಗಳ ಕುರಿತು ತಿಳಿಸಿಕೊಟ್ಟರು.
ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅದರ ಆಘಾತದಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಈ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಬಾಧಿತ ವಿದ್ಯಾರ್ಥಿಗಳ ಪರವಾಗಿ ಹೋರಾಟ ಮಾಡುತ್ತಿದ್ದ ಕಾಂಗ್ರೆಸ್ ನಾಯಕರ ಮೇಲೆ ಅನ್ಯಾಯವಾಗಿ ಹಲ್ಲೆ ನಡೆಸಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಾ. ರಮೇಶ್ , ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೊಜಕ ಪ್ರವೀಣ್ ಮುಂಡೋಡಿ ಸಹಿತ ಇತರ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Leave a Reply

Discover more from

Subscribe now to keep reading and get access to the full archive.

Continue reading