ಕಾಕ್ರೋಚ್ ಎಂದು ಕರೆದಿದ್ದ ಸೂರ್ಯಕಾಂತ್ ಅವರಿಗೆ ಧನ್ಯವಾದ ತಿಳಿಸಿದ ಅಭಿಜೀತ್ ದೀಪ್ಕೆ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ನಿರಂತರ ಪ್ರತಿಭಟನೆಗಳ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸಿಜೆಪಿ ವತಿಯಿಂದ ಸಿಜೆಐ ಸೂರ್ಯಕಾಂತ್ ಅವರಿಗೆ ಧನ್ಯವಾದಗಳನ್ನು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಭಿಜೀತ್ ದೀಪ್ಕೆ, ಅಂದು ಇಲ್ಲಿ ಪ್ರಶ್ನಿಸುವವರನ್ನು ನ್ಯಾಯಮೂರ್ತಿಗಳು ಕಾಕ್ರೋಚ್ ಎಂದು ಮೂದಲಿಸದಿದ್ದರೆ ಇಂದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಹಂತಕ್ಕೆ ಬೆಳೆಯುತ್ತಿರಲಿಲ್ಲ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ಎಂಬ ಪಕ್ಷವೂ ಹುಟ್ಟುತ್ತಿರಲಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆ ಹಾಗೂ ಒತ್ತಡಕ್ಕೆ ಮಣಿದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಈ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಈ ಪ್ರತಿಭಟನೆಯ ನೇತೃತ್ವವನ್ನು ಕಾಕ್ರೋಚ್ ಜನತಾ ಪಾರ್ಟಿ ವಹಿಸಿತ್ತು. ಈ ಪ್ರತಿಭಟನೆಗೆ ಕಾರಣವಾದ ‘ಕಾಕ್ರೋಚ್’ ಎಂಬ ಪದವನ್ನು ಮೊದಲು ಬಳಸಿದ್ದು ಸಿಜೆಐ ಸೂರ್ಯಕಾಂತ್ ಎಂಬುದು ಇಲ್ಲಿ ಗಮನಾರ್ಹವಾಗಿದೆ.

Leave a Reply

Discover more from

Subscribe now to keep reading and get access to the full archive.

Continue reading