ಮೈಸೂರಿನಲ್ಲಿ ಅಪಘಾತ: ಸುಳ್ಯದ ಯುವಕ ಮೃತ್ಯು

ಮೈಸೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಅಜ್ಜಾವರ ಗ್ರಾಮದ ಕಾಂತಮಂಗಲದ ಯುವಕ ನಿಕೇಶ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಜುಲೈ 24 ರಂದು ಮೈಸೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಿಕೇಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಮುಂಜಾನೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಿಕೇಶ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಕಾಂತಮಂಗಲದ ಮನೆಗೆ ಬರುತ್ತಿರುವ ವೇಳೆ ಈ ಘಟನೆ ನಡೆದಿದೆ. ಮೃತರು ತಂದೆ ಜಗದೀಶ್, ತಾಯಿ ಉಷಾ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading