ಕುಂದಾಪುರದಲ್ಲಿ ಶುಕ್ರವಾರ ಮುಂಜಾನೆ 3.50ರ ಸುಮಾರಿಗೆ ಬಾರ್ಕೂರು ಮೂಲದ ಐವನ್ ರಚರ್ಡ್ ಮಸ್ಕರೇನಸ್ ಎಂಬ ವ್ಯಕ್ತಿಯನ್ನು ಶೂಟೌಟ್ ನಡೆಸಿ ಹತ್ಯೆ ಮಾಡಲಾಗಿದೆ. ಈ ಕೃತ್ಯವು ಹಣಕಾಸಿನ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಆತಂಕವನ್ನುಂಟು ಮಾಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಹಾಗೂ ತನಿಖೆಯನ್ನು ಮುಂದುವರೆಸಿದ್ದಾರೆ.









