ಕೆ ಎಸ್ ಆರ್ ಟಿ ಸಿ ಸಂಸ್ಥಾಪನಾ ದಿನಾಚರಣೆ: ಅಧಿಕಾರಿ ಮತ್ತು ಸಿಬಂಧಿ ವರ್ಗಕ್ಕೆ ಅಭಿನಂದನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ತನ್ನ ಹೆಮ್ಮೆಯ 65ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದೆ. 1961ರಲ್ಲಿ ಆರಂಭವಾದಾಗಿನಿಂದ ಇಂದಿನವರೆಗೆ ಬರೋಬ್ಬರಿ 65 ವರ್ಷಗಳ ಕಾಲ ಸತತವಾಗಿ ಅತ್ಯುತ್ತಮ ಮತ್ತು ನಿರಂತರ ಸೇವೆಯನ್ನು ನೀಡುತ್ತಾ ಬಂದಿರುವ ಕೆಎಸ್‌ಆರ್‌ಟಿಸಿ, ರಾಜ್ಯದ ಜನಸಾಮಾನ್ಯರ ಜೀವನಾಡಿಯಾಗಿ ಗುರುತಿಸಿಕೊಂಡಿದೆ.
ಈ ವಿಶೇಷ ಸಂದರ್ಭದಲ್ಲಿ ನಿಗಮದ ವತಿಯಿಂದ ಸಮಸ್ತ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬದವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಲಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಗುಣಮಟ್ಟದ ಸಾರಿಗೆ ಸೇವೆಯನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ನಿಗಮ, ಮುಂದಿನ ದಿನಗಳಲ್ಲಿ ಸೇವೆಯನ್ನು ಇನ್ನಷ್ಟು ಉತ್ತಮಪಡಿಸುವ ಗಟ್ಟಿಯಾದ ಸಂಕಲ್ಪ ಮಾಡಿದೆ.

Leave a Reply

Discover more from

Subscribe now to keep reading and get access to the full archive.

Continue reading