ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ ಖಾಝಿಯಾಗಿ ಸಯ್ಯದುಲ್ ಉಲಮಾ ಜಿಫ್ರಿ ಮುತ್ತು ಕೋಯಾ ತಂಙಳ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಸಮಸ್ತದ ಅಧೀನದಲ್ಲಿ ಬರುವ ಸುಮಾರು 14 ಜಮಾಅತ್ ಗಳ ಸಂಯುಕ್ತ ಖಾಝಿಯಾಗಿ ಇವರನ್ನು ನೇಮಕ ಮಾಡಲಾಗಿದ್ದು, ಅಧಿಕಾರ ಸ್ವೀಕಾರ ಸಮಾರಂಭವು ಆಗಸ್ಟ್ 4ರಂದು ಸಂಜೆ 4 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಬಹು ಎನ್.ಪಿ.ಎಂ ಝೈನುಲ್ ಆಬಿಧೀನ್ ತಂಙಳ್ ದುಗ್ಗಲಡ್ಕ ಅವರು ಉದ್ಘಾಟಿಸಲಿದ್ದಾರೆ. ಸಂಯುಕ್ತ ಜಮಾಅತ್ ನ ಅಧ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಖ್ಯಾತ ವಾಗ್ಮಿ ಅಬ್ದುಲ್ ಸಲಾಂ ಬಾಖವಿ ಮುಖ್ಯ ಪ್ರಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅಸ್ಸಯ್ಯದ್ ಪೂಕೋಯ ತಂಘಳ್ ಪುತ್ತೂರು, ಶೈಖುನಾ ಎಂ.ಟಿ. ಅಬ್ದುಲ್ಲ ಮುಸ್ಲಿಯಾರ್, ಕೆ.ಎ. ಉಮ್ಮರ್ ಮುಸ್ಲಿಯಾರ್, ಉಮ್ಮರ್ ಪೈಝಿ ಮುಕಂ, ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲ ಫೈಝಿ, ಮುಶಾವರ ಸದಸ್ಯರಾದ ಬಂಬ್ರಾಣ ಉಸ್ತಾದ್, ಉಸ್ಮಾನ್ ಫೈಝಿ ತೊಡಾರ್, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಹಾಗೂ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರುಗಳು ಉಪಸ್ಥಿತರಿರಲಿದ್ದಾರೆ.
ತಾಲೂಕಿನ 14 ಜಮಾಅತ್ ಗಳ ಸರ್ವ ಸದಸ್ಯರು ಹಾಗೂ ಸಮಸ್ತ ಅಭಿಮಾನಿಗಳು ಖಾಝಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಸುಮಾರು ಒಂದು ಸಾವಿರ ಜನ ಪಾಲ್ಗೊಳ್ಳಲಿದ್ದಾರೆ.

