ಕಾವೇರಿ ವಿವಾದದ ಮಧ್ಯೆ ತೃಷಾ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಮಾತನಾಡುವಾಗ ನಟಿ ತೃಷಾ ಅವರ ಹೆಸರು ಪ್ರಸ್ತಾಪಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿ ಹಾಗೂ ಪ್ರಮುಖ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ. ಮಹಿಳೆಗೆ ಅಪಮಾನವಾಗುವ ರೀತಿಯಲ್ಲಿ ಮಾತನಾಡಿದ್ದಕ್ಕಾಗಿ ಅವರ ವಿರುದ್ಧ ಪೋಲಿಸರು ಈ ಕ್ರಮ ಕೈಗೊಂಡಿದ್ದಾರೆ.

ಕಾವೇರಿ ವಿಷಯದ ಕುರಿತು ಮಾತನಾಡುತ್ತಿದ್ದಾಗ, ಪ್ರೇಕ್ಷಕರೊಬ್ಬರು ‘ತೃಷಾ, ತೃಷಾ’ ಎಂದು ಜೋರಾಗಿ ಕೂಗಿದ್ದರು. ಇದಕ್ಕೆ ಪ್ರತಿಯಾಗಿ ಉದಯನಿಧಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ನಮಗೆ ನೀರು ಸಿಗಲಿ ಸಿಗದಿರಲಿ, ನೀರು ಹೋಗಬೇಕಾದ ಜಾಗಕ್ಕೆ ಹೋಗುತ್ತಿದೆ’ ಎನ್ನುವ ರೀತಿಯಲ್ಲಿ ಅವರು ಪ್ರತಿಕ್ರಿಯಿಸಿದ್ದರು.

ಈ ಹೇಳಿಕೆ ಹೊರಬರುತ್ತಿದ್ದಂತೆ ತಮಿಳುನಾಡು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ ಮತ್ತು ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ.

ರಾಜಕೀಯ ನಾಯಕರೊಬ್ಬರಿಂದ ಮಹಿಳೆಯರನ್ನು ನಿಂದಿಸುವ ಇಂತಹ ಕೀಳು ನಡವಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಾರ್ವಜನಿಕರು ಮತ್ತು ಸಿನಿಮಾ ಅಭಿಮಾನಿಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಉದಯನಿಧಿ ಅವರ ಮಾತಿಗೆ ಸೋಷಿಯಲ್ ಮೀಡಿಯಾದ್ಯಂತ ಕಟು ವಿರೋಧ ವ್ಯಕ್ತವಾಗಿದೆ.

ದೂರುಗಳು ಮತ್ತು ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳು ಪ್ರಗತಿಯಲ್ಲಿವೆ.

Leave a Reply

Discover more from

Subscribe now to keep reading and get access to the full archive.

Continue reading