


ಸುಳ್ಯ: ಬಾರೀ ಕೋಲಾಹಲ ಎಬ್ಬಿಸಿದ್ದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಸುಳ್ಯ ಕಲ್ಲುಮುಟ್ಲುವಿನ ನಿವಾಸಿ ಉಮ್ಮರ್ ಫಾರೂಕ್ ನನ್ನು ಕೇರಳದ ಕೊಚ್ಚಿಯಲ್ಲಿ ವಶಕ್ಕೆ ಪಡೆಯಲಾಗಿದೆ.
ಪ್ರಕರಣದ 13ನೇ ಆರೋಪಿಯಾಗಿರುವ ಈತ, ಹತ್ಯೆಯಲ್ಲಿ ಭಾಗಿಯಾಗಿದ್ದ ಇತರ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಸೂಕ್ತ ಆಶ್ರಯ ನೀಡಿದ್ದಲ್ಲದೆ, ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಅಗತ್ಯ ನೆರವು ನೀಡಿದ್ದ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ. ಈತನ ಪತ್ತೆಗೆ ವ್ಯಾಪಕ ಬಲೆ ಬೀಸಿ ರೂಪಾಯಿ ಎರಡು ಲಕ್ಷ ಇನಾಮು ಕೂಡಾ ಘೋಷಿಸಲಾಗಿತ್ತು. ಇತ್ತೀಚೆಗೆ ಬಂಧಿತನಾದ ಆರೋಪಿಯ ತೀವ್ರ ವಿಚಾರಣೆ ನಂತರ ಉಮರ್ ಫಾರೂಕ್ ಬಂಧನ ನಡೆದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈವರೆಗೆ ಒಟ್ಟು 25 ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.






