ಸಂಪಾಜೆ ಶಾಲೆಯ ವಿದ್ಯಾರ್ಥಿನಿ ಯಶ್ವಿಕಾ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ

ಸಂಪಾಜೆ: ಎಲಿಮಲೆಯಲ್ಲಿ ನಡೆದ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ (RMSA) ಸಂಪಾಜೆಯ 6ನೇ ತರಗತಿಯ ವಿದ್ಯಾರ್ಥಿನಿ ಯಶ್ವಿಕಾ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯಾಟದಲ್ಲಿ ಅತ್ಯುತ್ತಮ ಕೌಶಲ್ಯ ಪ್ರದರ್ಶಿಸಿದ ಯಶ್ವಿಕಾ, ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading