ಉಡುಪಿ ಮುದರಂಗಡಿಯಲ್ಲಿ ಡೇವಿಡ್ ಡಿಸೋಜಾ ಭೀಕರ ಕೊಲೆ – 10 ದಿನಗಳಲ್ಲಿ ಎರಡನೇ ಕೊಲೆ ಕೃತ್ಯ!

ಉಡುಪಿ ತಾಲೂಕಿನ ಮುದರಂಗಡಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು ಮೂರು ಗಂಟೆಯ ವೇಳೆಗೆ ಡೇವಿಡ್ ಡಿಸೋಜಾ ಅವರನ್ನು ಅವರ ಕಚೇರಿಯ ಬಳಿಯೇ ದುಷ್ಕರ್ಮಿಗಳು ಶೂಟೌಟ್ ಮಾಡಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವೆಂದರೆ, ಉಡುಪಿ ಜಿಲ್ಲೆಯಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ ಸಂಭವಿಸುತ್ತಿರುವ ಎರಡನೇ ಕೊಲೆ ಕೃತ್ಯ ಇದಾಗಿದ್ದು, ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ.

ಕಚೇರಿಯ ಬಳಿ ಗುಂಡಿನ ದಾಳಿ ನಡೆಸಿ ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Leave a Reply

Discover more from

Subscribe now to keep reading and get access to the full archive.

Continue reading